ಬಂಟ್ವಾಳ: ಗ್ರಾಮಾಂತರ ಪೊಲೀಸ್ ಠಾಣೆಯ ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸಜೀಪನಡು ಗ್ರಾಮದ ಮಿತ್ತಪಡ್ಪು ನಿವಾಸಿ ಅಫ್ರಿದಿ ತಲೆಮರೆಸಿಕೊಂಡಿದ್ದ ಆರೋಪಿ.
ವಾರೆಂಟ್ ಜಾರಿಯಾಗಿ ಸುಮಾರು 2 ವರ್ಷಗಳಿಂದ ನ್ಯಾಯಾಲಯಕ್ಕೂ ಹಾಜರಾಗದೆ ತಲೆಮರೆಸಿಕೊಂಡಿದ್ದ ಈತನನ್ನು ಪ್ರಸ್ತುತ ದಸ್ತಗಿರಿ ಮಾಡಿರುವ ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.