ಪುತ್ತೂರು: ವರ್ಷದ ಹಿಂದೆ ಬಸ್ ನಲ್ಲಿ ಮಹಿಳೆಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಈಶ್ವರಮಂಗಲ ಮಾಡನ್ನೂರು ಗ್ರಾಮ, ದೆಂತಾಡಿ ಮನೆ ಮೊಹಮ್ಮದ್ ಸತ್ತಾರ್ ಬಂಧಿತ ಆರೋಪಿ.
ಈತ 2022 ರಲ್ಲಿ ಬಸ್ ನಲ್ಲಿ ಮಹಿಳೆಯೊಬ್ಬರಿಗೆ ಕಿರುಕುಳ ನೀಡಿದ ಆರೋಪದಲ್ಲಿ ಪೊಲೀಸರಿಂದ ಬಂಧಿತನಾಗಿದ್ದ.
ನ್ಯಾಯಾಲಯದಲ್ಲಿ ಜಾಮೀನಿನ ಮೇಲೆ ಬಿಡುಗಡೆಗೊಂಡ ಆರೋಪಿಯು ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ನ್ಯಾಯಾಲಯ ಆರೋಪಿ ವಿರುದ್ಧ ವಾರಂಟ್ ಜಾರಿ ಮಾಡಿತ್ತು. ನಗರ ಪೊಲೀಸ್ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ನ್ಯಾಯಾಲಯ ಆರೋಪಿಗೆ ಷರತ್ತು ಬದ್ದ ಜಾಮೀನು ಮಂಜೂರು ಮಾಡಿದೆ..