ನೆಲ್ಯಾಡಿ: ಬೆಂಗಳೂರಿನಿಂದ-ಮಂಗಳೂರು-ಕುಮಟಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಮಣ್ಣಗುಂಡಿ ಎಂಬಲ್ಲಿ ನಡೆದಿದೆ.
ಘಟನೆಯಲ್ಲಿ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.

ಗಂಭೀರ ಗಾಯಗೊಂಡ ಇಬ್ಬರನ್ನು ಪುತ್ತೂರಿಗೆ ಹಾಗೂ ಮತ್ತಿಬ್ಬರನ್ನು ಮಂಗಳೂರಿಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.
ಅಪಘಾತದಲ್ಲಿ ಸಣ್ಣಪುಟ್ಟ ಗಾಯಗೊಂಡವರು ನೆಲ್ಯಾಡಿಯ ಅಶ್ವಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿರುವುದಾಗಿ ತಿಳಿದು ಬಂದಿದೆ.