ವಿಟ್ಲ: ಪೊಲೀಸ್ ಠಾಣೆಯ ಚೆಕ್ ಅಮಾನ್ಯ ಪ್ರಕರಣದಲ್ಲಿ ಆರೋಪಿಗೆ ಜಾಮೀನು ನೀಡಿದ್ದ ಸದ್ರಿ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮಾಣಿಲ ಮುರುವ ನಿವಾಸಿ ನಾರಾಯಣ ಪೂಜಾರಿ (45) ಬಂಧಿತ ಆರೋಪಿ.

ನಾರಾಯಣ ಪೂಜಾರಿ ರವರು ಚೆಕ್ ಅಮಾನ್ಯ ಪ್ರಕರಣದಲ್ಲಿ ಆರೋಪಿಗೆ ಜಾಮೀನು ನೀಡಿದ್ದರು. ಸದ್ರಿ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ಈ ಹಿನ್ನೆಲೆ ನ್ಯಾಯಾಲಯ ವಾರಂಟ್ ಜಾರಿ ಮಾಡಿತ್ತು.
ಫೆ.15 ರಂದು ವಿಟ್ಲ ಠಾಣಾ ಎಎಸ್ಐ ರವೀಶ್ ಮತ್ತು ಪಿಸಿ ವಿಠಲ್ ರವರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.