ಪುತ್ತೂರು: ನಗರ ಠಾಣೆಯಲ್ಲಿ ದಾಖಲಾಗಿದ್ದ ಚೆಕ್ ಅಮಾನ್ಯ ಪ್ರಕರಣದಲ್ಲಿ ಆರೋಪಿಯಾಗಿ ನ್ಯಾಯಾಲಯದಿಂದ ವಾರೆಂಟ್ ಜಾರಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೃಷ್ಣನಗರ ಕಲಂದರ್ ನವಾಜ್ ಬಂಧಿತ ಆರೋಪಿ.
ಪುತ್ತೂರು ನಗರ ಠಾಣಾ ಹೆಚ್.ಸಿ ಪರಮೇಶ್ವರ ಮತ್ತು ಪಿ ಸಿ ಗಿರಿಪ್ರಶಾಂತ್ ರವರು ಫೆ.16 ರಂದು ಆರೋಪಿಯನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ.