ವಿಟ್ಲ: ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ವಿಟ್ಲ ಸಮೀಪದ ಬದನಾಜೆ ಎಂಬಲ್ಲಿ ನಡೆದಿದೆ.

ಮಾರುತಿ 800 ಕಾರು ಮತ್ತು ಬೈಕ್ ನಡುವೆ ಈ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಬೈಕ್ ಸವಾರ ಶಿವಾಜಿನಗರ ಕುಜಪ್ಪಾಡಿ ನಿವಾಸಿ ಶಶಿಧರ್ ರವರು ಗಾಯಗೊಂಡಿರುವುದಾಗಿ ತಿಳಿದು ಬಂದಿದೆ.
ಗಾಯಾಳುವನ್ನು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ..