ಬೆಂಗಳೂರು: ಮಾಜಿ ಸ್ಪೀಕರ್, ಹಿರಿಯ ಕಾಂಗ್ರೆಸ್ ನಾಯಕ ರಮೇಶ್ ಕುಮಾರ್ ಅವರ ಪತ್ನಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಶುಕ್ರವಾರ ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ.
ಕಳೆದ 2 ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವಿಜಯಮ್ಮ ಅವರಿಗೆ 69 ವರ್ಷ ವಯಸ್ಸಾಗಿತ್ತು.
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ವಿಜಯಮ್ಮರನ್ನು ಎರಡು ದಿನಗಳ ಹಿಂದೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಪತಿ ರಮೇಶ್ ಕುಮಾರ್, ಓರ್ವ ಪುತ್ರ, ಓರ್ವ ಪುತ್ರಿ ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ…