ಪುತ್ತೂರು: ಬ್ಯಾಂಕ್ ವೊಂದಕ್ಕೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಿಟ್ಲ ಮೂಲದ ಆರೋಪಿಯನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.
ವಿಟ್ಲ ಬೋಳಂತಿಮೊಗರು ನಿವಾಸಿ ಅಬ್ದುಲ್ ಗಫೂರ್ ಎಂಬವರ ಮಗ ಮೊಹಮ್ಮದ್ ಅನ್ವರ್ ಬಂಧಿತ ಆರೋಪಿ.

2017ರಲ್ಲಿ ಆರೋಪಿ ಅನ್ವರ್ ವಿರುದ್ಧ ಕಬಕದ ಬ್ಯಾಂಕ್ ವೊಂದರಲ್ಲಿ ಸಾಲಕ್ಕೆ ಸಂಬಂಧಿಸಿದಂತೆ ವಂಚನೆ ಪ್ರಕರಣ ದಾಖಲಾಗಿತ್ತು. ಆರೋಪಿ ಬಳಿಕ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದರು.
ನ್ಯಾಯಾಲಯದಲ್ಲಿ ಆರೋಪಿ ವಿರುದ್ಧ ವಾರಂಟ್ ಜಾರಿ ಮಾಡಿತ್ತು. ಪುತ್ತೂರು ಪೊಲೀಸರು ಆರೋಪಿಯನ್ನು ವಿಟ್ಲದಲ್ಲಿ ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ..