ಪುತ್ತೂರು: ಈಜಲು ನದಿಗೆ ಇಳಿದ ವೇಳೆ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ದೊಡ್ಡೇರಿ ಸಮೀಪದ ಪಯಸ್ವಿನಿ ನದಿಯಲ್ಲಿ ಸಂಭವಿಸಿದ್ದು,
ಪುತ್ತೂರು ತಾಲೂಕಿನ ಕೌಡಿಚ್ಚಾರು ಸಮೀಪದ ಅರಿಯಡ್ಕದ ದೇರ್ಲ ನಾರಾಯಣ ಪಾಟಾಳಿ ಅವರ ಪುತ್ರ ಜಿತೇಶ್ (19) ಮತ್ತು ಪಡುವನ್ನೂರು ಗ್ರಾಮದ ಅಂಬಟೆಮೂಲೆಯ ಕೃಷ್ಣ ನಾಯ್ಕರ ಪುತ್ರ ಪ್ರವೀಣ್ (19) ರವರು ಘಟನೆಯಲ್ಲಿ ಸಾವನ್ನಪ್ಪಿದ್ದು, ಮೃತ ಯುವಕರ ಮನೆಗೆ ಪುತ್ತೂರು ಶಾಸಕರಾದ ಸಂಜೀವ ಮಠಂದೂರು ರವರು ಹಾಗೂ ಕರಾವಳಿ ಪ್ರಾಧಿಕಾರ ಅಧ್ಯಕ್ಷರಾದ ಚನಿಲ ತಿಮ್ಮಪ್ಪ ಶೆಟ್ಟಿ ಅವರು ಭೇಟಿ ನೀಡಿದರು.
ಯುವಕರ ಮನೆಗೆ ಭೇಟಿ ನೀಡಿದ ಅವರು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.