ಕಡಬ: ರೆಂಜಿಲಾಡಿ ಗ್ರಾಮದ ಇಬ್ಬರು ಆನೆ ದಾಳಿಗೆ ಒಳಗಾಗಿ ಮೃತಪಟ್ಟ ಹಿನ್ನೆಲೆ ಅರಣ್ಯ ಇಲಾಖೆಯ ವಿರುದ್ಧ ಮತ್ತು ಆನೆ ಸಮಸ್ಯೆಯ ಬಗ್ಗೆ ವ್ಯಕ್ತಿಯೋರ್ವರು ಈ ಹಿಂದೆ ಮಾಡಿದ್ದ ವೀಡಿಯೋವನ್ನು ಕಡಬ ಪೊಲೀಸರು ಡಿಲೀಟ್ ಮಾಡಿರುವ
ಹಿನ್ನಲೆಯಲ್ಲಿ ಮಾತಿನ ಚಕಮಕಿ ನಡೆದು ಸ್ಥಳದಲ್ಲಿ ಕೆಲಕಾಲ ಉದ್ವಿಘ್ನ ಪರಿಸ್ಥಿತಿ ನಿರ್ಮಾಣವಾದ ಘಟನೆ ನಡೆದಿದೆ.
ಸ್ಥಳಕ್ಕೆ ಸಚಿವರು, ಜಿಲ್ಲಾಧಿಕಾರಿ ಬಾರದೆ ಮೃತದೇಹ ಸಂಸ್ಕಾರ ಮಾಡುವುದಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಈ ಭಾಗದಲ್ಲಿ ನಿರಂತರ ಆನೆ ಹಾವಳಿ ಆಗುತ್ತಿದ್ದರೂ ಅರಣ್ಯ ಇಲಾಖೆ ತೀವ್ರ ನಿರ್ಲಕ್ಷ್ಯ ವಹಿಸುತ್ತಿದೆ ಎಂಬುದು ಸಾರ್ವಜನಿಕರ ಆರೋಪವಾಗಿದೆ.
ಕೆಲ ದಿನಗಳ ಹಿಂದೆ ಮರ್ದಾಳದ ಸಂತೋಷ್ ಎಂಬವರು ಆನೆ
ಸಮಸ್ಯೆಯ ಬಗ್ಗೆ ವರದಿ ತಯಾರಿಸಿ ವೀಡಿಯೋ ಮಾಡಿ
ಯೂಟ್ಯೂಬ್ ನಲ್ಲಿ ಅಪ್ಲೋಡ್ ಮಾಡಿದ್ದರು. ಈ ಬಗ್ಗೆ ಐತ್ತೂರು
ಪಿಡಿಓ ಅವರು ದೂರು ನೀಡಿದ್ದ ಹಿನ್ನೆಲೆಯಲ್ಲಿ ಕಡಬ ಪೋಲಿಸರು
ವೀಡಿಯೋ ಡಿಲೀಟ್ ಮಾಡಿದ್ದರು. ಈ ವಿಚಾರವೂ ಪ್ರಸ್ತಾಪವಾಗಿ
ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ಸ್ಥಳದಲ್ಲಿ
ಎಲ್ಲರೂ ಇಲಾಖಾ ಅಧಿಕಾರಿಗಳ ವಿರುದ್ಧ ಆಕ್ರೋಶ
ವ್ಯಕ್ತಪಡಿಸುತ್ತ ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ..