ಕಡಬ: ರೆಂಜಿಲಾಡಿ ಗ್ರಾಮದ ಇಬ್ಬರು ಆನೆ ದಾಳಿಗೆ ಒಳಗಾಗಿ ಮೃತಪಟ್ಟಿದ್ದು, ಅವರ ಕುಟುಂಬಕ್ಕೆ ಜಿಲ್ಲಾಧಿಕಾರಿ 15 ಲಕ್ಷ ರೂ. ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.
ಇಂದು ಬೆಳ್ಳಂಬೆಳಗ್ಗೆ ಕಾಡಾನೆ ದಾಳಿಗೆ ರಮೇಶ್ ರೈ ಮತ್ತು ರಂಜಿತಾ ಬಲಿಯಾಗಿದ್ದು, ಅರಣ್ಯಾಧಿಕಾರಿ, ಪೊಲೀಸ್ ಇಲಾಖೆ ವಿರುದ್ಧ ಸ್ಥಳೀಯರು ಆಕ್ರೋಶ ಪಡಿಸಿದ್ದಾರೆ.
ಸ್ಥಳಕ್ಕೆ ಜಿಲ್ಲಾಧಿಕಾರಿಗಳು, ಸಚಿವರು ಆಗಮಿಸದೆ ಮೃತರ ಮೃತದೇಹವನ್ನು ತೆಗೆಯುವುದಿಲ್ಲ ಎಂದು ಸಾರ್ವಜನಿಕರು ಪಟ್ಟು ಹಿಡಿದಿದ್ದು, ಸ್ಥಳಕ್ಕೆ ಆಗಮಿಸಿ ಜಿಲ್ಲಾಧಿಕಾರಿ ರವಿಕುಮಾರ್ ರವರು ಮೃತರ ಕುಟುಂಬಕ್ಕೆ ತಲಾ 15 ಲಕ್ಷ ರೂ. ಪರಿಹಾರ ಧನ ನೀಡಿದ್ದು, ಮುಂದಿನ ದಿನಗಳಲ್ಲಿ ಇಂತಹ ಯಾವುದೇ ಘಟನೆಗಳು ನಡೆಯದಂತೆ ಕ್ರಮಕೈಗೊಳ್ಳುವುದಾಗಿ ತಿಳಿಸಿದರು ಎಂದು ವರದಿಯಾಗಿದೆ.
ಸ್ಥಳದಲ್ಲಿ ನೂರಾರು ಸಂಖ್ಯೆಯಲ್ಲಿ ಜನ ಜಮಾವಣೆಗೊಂಡಿದ್ದು, ಈ ಭಾಗದಲ್ಲಿ ನಿರಂತರ ಆನೆ ಹಾವಳಿ ಆಗುತ್ತಿದ್ದರೂ ಅರಣ್ಯ ಇಲಾಖೆ ತೀವ್ರ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಆರೋಪಿಸಿದ್ದಾರೆ..