ಬೆಳ್ತಂಗಡಿ: ಬೈಕ್ ಮತ್ತು ಪಿಕಪ್ ವಾಹನದ ಮಧ್ಯೆ ಅಪಘಾತ ನಡೆದು ವಿದ್ಯಾರ್ಥಿ ಮೃತಪಟ್ಟ ಘಟನೆ ಕೊಕ್ರಾಡಿಯಲ್ಲಿ ನಡೆದಿದೆ.
ಕೊಕ್ರಾಡಿಯ ನಿವಾಸಿ, ಮೂಡುಬಿದಿರೆ ಖಾಸಗಿ ಕಾಲೇಜಿನ ವಿದ್ಯಾರ್ಥಿ ಉಜ್ವಲ್ ಹೆಗ್ಡೆ ಮೃತ ಯುವಕ.

ಇಂದು ಬೆಳಗ್ಗೆ ಮನೆಯಿಂದ ಕಾಲೇಜಿಗೆ ಹೋಗುತ್ತಿದ್ದ ವೇಳೆ ಉಜ್ವಲ್ ಚಲಾಯಿಸುತ್ತಿದ್ದ ಬೈಕ್ ಗೆ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ಪಿಕಪ್ ವಾಹನ ಡಿಕ್ಕಿ ಹೊಡೆದಿದೆ.
ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಉಜ್ವಲ್ ರಸ್ತೆಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ವೇಣೂರು ಠಾಣಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ..