ವಿಟ್ಲದ ಅಡ್ಯನಡ್ಕದಲ್ಲಿ ಶೈಕ್ಷಣಿಕ ಕಾರ್ಯಾಗಾರದಲ್ಲಿ ಇಸ್ಲಾಂ ಮತ ಪ್ರವಚನ ಮಾಡುತ್ತಿದ್ದಾರೆಂದು ಹಿಂದೂ ಸಂಘಟನೆ ದಾಳಿ ನಡೆಸಿದ ವಿಚಾರವನ್ನು ಉಳ್ಳಾಲ ಶಾಸಕರಾದ ಯುಟಿ ಖಾದರ್ ರವರು ಅಧಿವೇಶನದಲ್ಲಿ ಪ್ರಸ್ತಾಪಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಶಾಸಕ ಯು.ಟಿ. ಖಾದರ್ ರವರು ‘ಕಾನೂನು ಸುವ್ಯವಸ್ಥೆಗೆ ಧಕ್ಕೆಯನ್ನುಂಟು ಮಾಡುವ ವಿಚಾರಕ್ಕೆ ಪೊಲೀಸರು ಕ್ರಮ ಕೈಗೊಳ್ಳಬೇಕು. ಮೊನ್ನೆ ಅಡ್ಯನಡ್ಕದ ಹಾಲ್ ನಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಕಾರ್ಯಗಾರ ನಡೆಸುತ್ತಿದ್ದು, ಈ ಸಂದರ್ಭದಲ್ಲಿ ಅಲ್ಲಿಗೆ ಕೆಲವರು ತೆರಳಿ, ಗಲಾಟೆ ಮಾಡಿ ನಿಮಗೆ ಯಾರು ಅನುಮತಿ ನೀಡಿದ್ದಾರೆ ಎಂದೆಲ್ಲಾ ಕೇಳಿದ್ದು, ಸಾಮಾಜಿಕ ದಬ್ಬಾಳಿಕೆ ನಡೆಸಿದ್ದಾರೆ.
ಅಷ್ಟೇ ಅಲ್ಲದೇ ಕಾರ್ಯಾಗಾರ ಸಂಘಟಿಸಿದವರ ಮೇಲೆಯೇ ಪ್ರಕರಣ ದಾಖಲಿಸಲಾಗಿದೆ. ಯಾರು ಈ ರೀತಿಯಾಗಿ ದಬ್ಬಾಳಿಕೆ ಮಾಡಿದ್ದಾರೆ ಅವರ ಮೇಲೆ ಯಾವುದೇ ಕ್ರಮಕೈಗೊಂಡಿಲ್ಲ.
ರಫೀಕ್ ಮಾಸ್ಟರ್ ವಿದ್ಯಾರ್ಥಿಗಳಿಗೆ ಕಾರ್ಯಾಗಾರ ನಡೆಸುವ ಬಗ್ಗೆ ಒಳ್ಳೆಯ ಹೆಸರುಗಳಿಸಿದ್ದಾರೆ. ಈ ಹಿನ್ನೆಲೆ ಮುಂದಿನ ದಿನಗಳಲ್ಲಿ ಇಂತಹ ಗೊಂದಲಗಳು ನಡೆಯದಂತೆ ಪೊಲೀಸರು ಕ್ರಮಕೈಗೊಳ್ಳಬೇಕು., ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಅವರು ಸದನದಲ್ಲಿ ಪ್ರಸ್ತಾಪಿಸಿದ್ದಾರೆ..