ವಿಟ್ಲ: ಸಾಲೆತ್ತೂರು ಸಮೀಪದ ಮೆದು ಎಂಬಲ್ಲಿನ ಪೆಟ್ರೋಲ್ ಬಂಕ್ ಮುಂಭಾಗ ನಿಲ್ಲಿಸಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಲಾರಿಯ ಮುಂದಿನ ಭಾಗ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಅಪಾರ ನಷ್ಟ ಸಂಭವಿಸಿದೆ.

ಪೆಟ್ರೋಲ್ ಬಂಕ್ ನ ಮುಂಭಾಗ ಈ ಘಟನೆ ನಡೆದಿದ್ದು, ಈ ಸಂದರ್ಭದಲ್ಲಿ ಸ್ಥಳೀಯರು ಹರಸಾಹಸ ಪಟ್ಟು ಬೆಂಕಿಯನ್ನು ನಂದಿಸಿ ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದಾರೆ. ಬಂಟ್ವಾಳ ಅಗ್ನಿಶಾಮಕದಳದ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ.
ಕಳೆದ 5 ತಿಂಗಳುಗಳ ಹಿಂದೆ ಈ ಹೊಸ ಲಾರಿಯನ್ನು ಖರೀದಿಸಿದ್ದಲ್ಲದೆ ನಿನ್ನೆ ಶೋ ರೂಮ್ ನಲ್ಲಿ ಸರ್ವಿಸ್ ನಡೆಸಿ ಬಂದಿರುವುದಾಗಿ ತಿಳಿದು ಬಂದಿದೆ..