ಕಾರವಾರ: ಪರೇಶ್ ಮೇಸ್ತಾ ಹತ್ಯೆ ಪ್ರಕರಣದ ಗಲಭೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಹಿಂಪಡೆದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
2017ರಲ್ಲಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಮೀನುಗಾರ ಕುಟುಂಬದ ಪರೇಶ್ ಮೇಸ್ತಾ ಅನುಮಾನಾಸ್ಪದವಾಗಿ ಸಾವು ಕಂಡಿದ್ದ. ಈ ಸಾವಿನ ಬಳಿಕ ಇಡೀ ಜಿಲ್ಲೆಯಲ್ಲಿ ಈ ಹತ್ಯೆ ಕೋಮು ಸಂಘರ್ಷಕ್ಕೆ ಕಾರಣವಾಗಿತ್ತು. ಶಿರಸಿಯಲ್ಲಿ ನಡೆದಿದ್ದ ಗಲಭೆಯಲ್ಲಿ 112 ಜನರ ಮೇಲಿದ್ದ ಮೂರು ಪ್ರಕರಣ ಹಿಂಪಡೆದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಆದೇಶ ಹೊರಡಿಸಿದ್ದಾರೆ.
ಈ ಹಿಂದೆ ಶಿರಸಿಯಲ್ಲಿ ದಾಖಲಾಗಿದ್ದ 26 ಪ್ರಕರಣವನ್ನು ಸರ್ಕಾರ ಹಿಂಪಡೆದಿತ್ತು. ಆದರೆ 112 ಜನರ ಮೇಲೆ ಮೂರು ಪ್ರಕರಣಗಳು ಬಾಕಿ ಉಳಿದಿದ್ದವು. ನಿನ್ನೆ 112 ಜನರ ಪ್ರಕರಣ ಹಿಂಪಡೆದು ಆದೇಶ ಮಾಡಲಾಗಿದ್ದು, ಹಲವರು ನಿಟ್ಟುಸಿರು ಬಿಡುವಂತಾಗಿದೆ..