ಮಂಗಳೂರು: ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಬೆಂಗಳೂರು ಪಶ್ಚಿಮ ಸಂಚಾರ ವಿಭಾಗದ ಡಿಸಿಪಿಯಾಗಿರುವ ಕುಲದೀಪ್ ಕುಮಾರ್ ಆರ್.ಜೈನ್ ಅವರನ್ನು ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತರ ಹುದ್ದೆಗೆ ನೇಮಕ ಮಾಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಶಶಿಕುಮಾರ್ ಅವರನ್ನು ರೈಲ್ವೇ ಇಲಾಖೆ ಪೊಲೀಸ್ ಡಿಐಜಿಯಾಗಿ ವರ್ಗಾವಣೆ ಮಾಡಲಾಗಿದೆ.
ಕುಲದೀಪ್ ಕುಮಾರ್ ಆರ್. ಜೈನ್ ಅವರನ್ನು ಮಂಗಳೂರು ಪೊಲೀಸ್ ಆಯುಕ್ತರಾಗಿ ನಿಯೋಜಿಸಿ ಸರ್ಕಾರ ಆದೇಶಿಸಿದೆ..