ಕಡಬ: ಕಾಡಾನೆ ಹಿಡಿದು ತೆರಳುತ್ತಿದ್ದ ಅರಣ್ಯ ಅಧಿಕಾರಿಗಳ, ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ವರದಿಯಾಗಿದೆ.
ಆಕ್ರೋಶಗೊಂಡ ಸ್ಥಳೀಯ ಕೆಲವರು ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ.

ಪೊಲೀಸ್ ಇಲಾಖಾ ವಾಹನಗಳಿಗೆ ಕಲ್ಲು ತೂರಾಟ ನಡೆದಿದೆ. ಒಂದು ಆನೆ ಹಿಡಿದಿದ್ದೀರೀ ಎಂದು ಹೇಳಿಕೊಂಡು ಈ ಕೃತ್ಯ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

ಕಾರ್ಯಾಚರಣೆ ನಿಲ್ಲಿಸಿಲ್ಲ ನಾಳೆ ಬರುತ್ತೇವೆ ಎಂದರೂ ಕೇಳದೇ ಕಲ್ಲು ತೂರಾಟ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಎರಡು ಪೋಲಿಸ್ ಜೀಪ್, ಅರಣ್ಯ ಇಲಾಖೆಯ ಒಂದು ಜೀಪ್, ರೇಂಜರ್ ಒಬ್ಬರ ಬ್ರೀಝಾ ಗಾಡಿಗಳು ಜಖಂಗೊಂಡಿದೆ.
ಇನ್ನೊಂದು ಕಾಡಾನೆಯನ್ನು ಹಿಡಿಯಲು ಕಾರ್ಯಾಚರಣೆ ಮುಂದುವರಿಸಲಾಗುವುದು ಎಂದು ಅರಣ್ಯ ಇಲಾಖೆ ಸ್ಪಷ್ಟಪಡಿಸಿದೆ..