ವಿಟ್ಲ: ಮುಳಿಯದಲ್ಲಿ ನಿನ್ನೆ ನಡೆದ ಬೈಕ್ ಸ್ಕಿಡ್ ನಲ್ಲಿ ಗಂಭೀರ ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಮೃತ ಬೈಕ್ ಸವಾರನನ್ನು ಕೇಪು ಮರಕ್ಕಿನಿ ನಿವಾಸಿ ಜಯಕುಮಾರ ಎಂದು ಗುರುತಿಸಲಾಗಿದೆ.
ಬೈಕ್ ಸ್ಕಿಡ್ ಆಗಿ ಜಯಕುಮಾರ್ ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೇ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.