ಕಡಬ: ತಾಲೂಕಿನಲ್ಲಿ ಕಾಡಾನೆ ಪತ್ತೆ ಕಾರ್ಯ ಮುಂದುವರಿದಿದೆ. ಆದರೇ ಸಾಕಾನೆಗಳಿಗೆ ವಿರಾಮ ನೀಡಲಾಗಿತ್ತು.
ಕಡಬ ತಾಲೂಕಿನ ರೆಂಜಿಲಾಡಿಯಲ್ಲಿ ಇಬ್ಬರನ್ನು ಕೊಂದ ಬಳಿಕ ಕಾಡಾನೆ ಸೆರೆಗೆ ಕಾರ್ಯಾಚರಣೆ ಆರಂಭಿಸಲಾಗಿತ್ತು. ಮಂಗಳವಾರ ಕಾರ್ಯಾಚರಣೆ ಆರಂಭಗೊಂಡಿದ್ದು, ಮೂರನೇ ದಿನ ಕೊಂಬಾರು ಬಳಿಯ ಮಂಡೆಕರದಲ್ಲಿ ಕೃತ್ಯ ಎಸಗಿದ ಕಾಡಾನೆಯನ್ನು ಸೆರೆ ಹಿಡಿದು ನಾಗರಹೊಳೆ ಮತ್ತಿಗೋಡು ಸಾಕಾನೆ ಶಿಬಿರಕ್ಕೆ ಕೊಂಡೊಯ್ಯಲಾಯಿತು. ಇದರ ಜೊತೆ ಮುಂಜಾಗ್ರತ ಹಿನ್ನೆಲೆಯಲ್ಲಿ ಅಭಿಮನ್ಯು ಹಾಗೂ ಇನ್ನೊಂದು ಆನೆಯನ್ನೂ ಕರೆದೊಯ್ಯಲಾಗಿದೆ.
ಶುಕ್ರವಾರ ಶಿಬಿರದಲ್ಲಿದ್ದ ಕಾರ್ಯಾಚರಣೆಯ ಮೂರು ಆನೆಗಳಿಗೆ ವಿರಾಮ ನೀಡಲಾಗಿತ್ತು. ಬೆಳಗ್ಗೆ ಮೂರು ಸಾಕಾನೆಗಳನ್ನು ಪೇರಡ್ಕ ಬಳಿಯ ಶಿಬಿರದಿಂದ ನೆಟ್ಟಣದ ಕೇಂದ್ರೀಯ ಮರ ಸಂಗ್ರಹಣ ಘಟಕಕ್ಕೆ ಕರೆದೊಯ್ದು ವಿಶ್ರಾಂತಿಗೆ ವ್ಯವಸ್ಥೆ ಮಾಡಲಾಗಿತ್ತು. ಆದರೆ ಸಿಬ್ಬಂದಿ ಕಾಡಾನೆ ಪತ್ತೆ ಕಾರ್ಯ ಮುಂದುವರಿಸಿದ್ದರು.