ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಬರುವ ಲಾಡ್ಜ್, ಹೋಂ ಸ್ಟೇ ಗಳಿಗೆ ಶನಿವಾರ ಸ್ಥಳೀಯ ಪೊಲೀಸ್ ಅಧಿಕಾರಿಗಳು ಅನಿರೀಕ್ಷಿತ ಭೇಟಿ ನೀಡಿ ಸಿಸಿ ಕ್ಯಾಮರಾ, ರಿಜಿಸ್ಟರ್ ಗಳನ್ನು ಪರಿಶೀಲಿಸಿದರು.

ಯಾವುದೇ ರೀತಿಯ ಅಕ್ರಮ ಚಟುವಟಿಕೆ ನಡೆಸದಂತೆ, ಸಂಶಯಾಸ್ಪದ ವ್ಯಕ್ತಿಗಳ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡುವಂತೆ ಲಾಡ್ಜ್, ಹೋಂಸ್ಟೇ ಮಾಲಕರಿಗೆ ಪೊಲೀಸರು ಸೂಚಿಸಿದರು ಎಂದು ತಿಳಿದು ಬಂದಿದೆ..