ಮಂಗಳೂರು: ಬಾಲಕನಿಗೆ ಥಳಿಸಿದ ಘಟನೆಗೆ ಸಂಬಂಧಿಸಿದ ಹಳೆ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗುತ್ತಿದ್ದು, ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021 ರಲ್ಲಿ ಬಾಲಕನಿಗೆ ಥಳಿಸಿದ ಘಟನೆಗೆ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, 10 ಜನರ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಪ್ರಸ್ತುತ ಪ್ರಕರಣ ನ್ಯಾಯಾಂಗ ವಿಚಾರಣೆಯಲ್ಲಿರುತ್ತದೆ.
ಈ ರೀತಿ ಹಳೆಯ ವೀಡಿಯೋಗಳನ್ನು ಅದರ ಪೂರ್ವಾಪರ ಪರಿಶೀಲಿಸದೆ ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿಸಿ ಸಮಾಜದ ಸ್ವಾಸ್ಥ್ಯ ಕೆಡಿಸುವವರ ವಿರುದ್ದವೂ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿಕ್ರಂ ಅಮಟೆ ಎಚ್ಚರಿಕೆ ನೀಡಿದ್ದಾರೆ.
ದಾಖಲಿಸಿಕೊಂಡು 10ಜನರ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ಮಾನ್ಯ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.ಪ್ರಸ್ತುತ ಪ್ರಕರಣ ನ್ಯಾಯಾಂಗ ವಿಚಾರಣೆಯಲ್ಲಿರುತ್ತದೆ. ಈ ರೀತಿಯ ಹಳೆಯ ವಿಡಿಯೋಗಳನ್ನು ಅದರ ಪೂರ್ವಾಪರತೆ ಪರಿಶೀಲಿಸದೇ ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿಸಿ ಸಮಾಜದ ಸ್ವಾಸ್ಥ್ಯ ಕೆಡಿಸುವವರ ವಿರುದ್ಧವೂ ಸೂಕ್ತ ಕಾನೂನುಕ್ರಮ ಕೈಗೊಳ್ಳಲಾಗುವುದು 2/2
— DK District Police (@spdkpolice) February 26, 2023