ನವದೆಹಲಿ : ಕೊರೋನಾ ವೈರಸ್ ಹೊಡೆತಕ್ಕೆ ನಲುಗಿರುವ ಭಾರತ ನಿಯಂತ್ರಣಕ್ಕೆ ಹರಸಾಹಸ ಪಡುತ್ತಿದೆ. ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ಕೊರೋನಾ ಅತೀಯಾಗಿರುವ ರಾಜ್ಯಗಳಲ್ಲಿ ಸೆಕ್ಷನ್ 114 , ಸೆಮಿ ಲಾಕ್‌ಡೌನ್ ಸೇರಿದಂತೆ ಹಲವು ನಿರ್ಬಂಧಗಳನ್ನು ಹೇರಲಾಗಿದೆ. ಇದೀಗ ಮತ್ತೆ ಆರ್ಥಿಕ ಸಂಕಷ್ಟ ಎದುರಾಗಿದೆ. ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ ಇದೀಗ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆ ಅಡಿ ಬಡವರಿಗೆ 2 ತಿಂಗಳು ಉಚಿತ ಅಕ್ಕಿ, ಆಹಾರ ಧಾನ್ಯ ನೀಡುವುದಾಗಿ ಘೋಷಿಸಿದೆ.
ಮೇ ಹಾಗೂ ಜೂನ್ ತಿಂಗಳಲ್ಲಿ ಒಬ್ಬ ವ್ಯಕ್ತಿಗೆ 5 ಕೆಜಿ ಅಕ್ಕಿ ಹಾಗೂ ಆಹಾರ ಧಾನ್ಯಗಳನ್ನು ಉಚಿತವಾಗಿ ನೀಡಲಾಗುತ್ತಿದೆ. ಈ ಮೂಲಕ ಸುಮಾರು 80 ಕೋಟಿ ಜನರು ಇದರ ಲಾಭ ಪಡೆದುಕೊಳ್ಳಲಿದ್ದಾರೆ. ಕಳೆದ ವರ್ಷ ಲಾಕ್‌ಡೌನ್ ವೇಳೆ ಪ್ರಧಾನಿ ಮೋದಿ ಗರೀಬ್ ಕಲ್ಯಾಣ್ ಯೋಜನೆ ಅಡಿ ಉಚಿತ ಆಹಾರ ಧಾನ್ಯ ನೀಡಲಾಗಿತ್ತು.
80 ಕೋಟಿ ಫಲಾನುಭವಿಗಳಗೆ 2 ತಿಂಗಳ ಉಚಿತ ಆಹಾರಕ್ಕಾಗಿ ಕೇಂದ್ರ ಸರ್ಕಾರ 26,000 ಕೋಟಿ ರೂಪಾಯಿ ಮೀಸಲಿಟ್ಟಿದೆ. ಕೊರೋನಾ ವೈರಸ್ 2ನೇ ಅಲೆ ದೇಶದಲ್ಲಿ ಸಂಕಷ್ಟದ ಪರಿಸ್ಥಿತಿಯನ್ನು ಸೃಷ್ಟಿಸಿದೆ. ಈ ಕಠಿಣ ಪರಿಸ್ಥಿತಿಯಲ್ಲಿ ದೇಶದ ಬಡವರಿಗೆ ಪೌಷ್ಟಿಕಾಂಶ ಅತೀ ಅಗತ್ಯವಾಗಿದೆ ಎಂದು ಮೋದಿ ಹೇಳಿದ್ದಾರೆ.