ಮಂಗಳೂರು : ಬೈಕ್ ಗೆ ನಾಯಿಯನ್ನು ಕಟ್ಟಿ ಅಮಾನವಿಯತೆಯಿಂದ ಎಳೆದೊಯ್ದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳಲ್ಲಿ ಒಬ್ಬನನ್ನು ಬಂಧಿಸಲಾಗಿದೆ. ಕೊಪ್ಪಳ ಜಿಲ್ಲೆಯ ನೀಲಪ್ಪ ಎಂಬಾತ ಬಂಧಿತ ಆರೋಪಿ. ಇನ್ನೊಬ್ಬನ ಮಾಹಿತಿ ಕಲೆ ಹಾಕಿರುವ ಪೊಲೀಸರು ಶೀಘ್ರ ಬಂಧಿಸುವ ಸಾಧ್ಯತೆ ಇದೆ.
ಮಂಗಳೂರು ನಗರ ಹೊರವಲಯದ ಸುರತ್ಕಲ್ ಸಮೀಪ ಏನ್ ಐಟಿಕೆ ರಾ. ಹೆ. ಯಲ್ಲಿ ಈ ಘಟನೆ ನಡೆದಿತ್ತು. ಮೂಕ ಪ್ರಾಣಿ ಮೇಲೆ ವಿಕೃತಿ ಮೆರೆದ ಈ ದೃಶ್ಯವನ್ನು ಹಿಂದೆ ಬರುತ್ತಿದ್ದ ಬೈಕ್ ಸವಾರರು ಚಿತ್ರೀಕರಿಸಿ ಅನಿಮಲ್ ಕೇರ್ ಟ್ರಸ್ಟ್ ಜೊತೆ ಹಂಚಿಕೊಂಡಿದ್ದರು. ಅದರಂತೆ ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ದೂರು ನೀಡಲಾಗಿತ್ತು.