ಮಂಗಳೂರು: ಚಿತ್ರಾಪುರ ಸಮೀಪದ ಪಣಂಬೂರು ಮೋಗವೀರ ಮಹಾಸಭಾ ವ್ಯಾಪ್ತಿಯ ಸಮುದ್ರ ತೀರದಲ್ಲಿ ಗಾಂಜಾ ಅಮಲಿನಲ್ಲಿ ರಿಕ್ಷಾ ಚಾಲಕನಿಗೆ ಹಲ್ಲೆ ನಡೆಸಿ, ರಿಕ್ಷಾಕ್ಕೆ ಹಾನಿ ಮಾಡಿದ ಘಟನೆಗೆ ಸಂಬಂಧಿಸಿದಂತೆ ಒಟ್ಟು ಮೂವರನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.
ಭಾನುವಾರದಂದು ಘಟನೆ ಸಂಬಂಧ ಪ್ರತೀಕ್ ಎಂಬಾತನನ್ನು ಬಂಧಿಸಲಾಗಿತ್ತು.
ಸೋಮವಾರ ಮತ್ತಿಬ್ಬರು ಆರೋಪಿಗಳಾದ ಅಮಲ್ ಅಜಯನ್ ಮತ್ತು ನಿಶಾಂತ್ ಬಂಧಿಸಲಾಗಿದೆ. ಇತರ ಮೂವರು ಆರೋಪಿಗಳಿಗೆ ಶೋಧ ಕಾರ್ಯ ಮುಂದುವರಿದಿದೆ.
ಬಂಧಿತರ ವಿರುದ್ದ ಐಪಿಸಿ ಸೆಕ್ಷನ್ 307 ಮತ್ತು ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಆರ್ ಜೈನ್ ತಿಳಿಸಿದ್ದಾರೆ.



























