ಪುತ್ತೂರು : ಸರಕಾರಿ ಮೆಡಿಕಲ್ ಕಾಲೇಜು ಹೋರಾಟ ಸಮಿತಿ, ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಹಾಗೂ ವಿಟ್ಲ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಪುತ್ತೂರಿನಲ್ಲಿ ಸರಕಾರಿ ಮೆಡಿಕಲ್ ಕಾಲೇಜಿಗಾಗಿ ಜಾಥಾ ಕಾರ್ಯಕ್ರಮವು ವಿಟ್ಲದ ಪ್ರಮುಖ ಬೀದಿಗಳಲ್ಲಿ ನಡೆಯಿತು.

ವಿಟ್ಲ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಾಬು ಕೆ.ವಿ, ಗೌರವಾಧ್ಯಕ್ಷ ಜಗನ್ನಾಥ ಸಾಲಿಯಾನ್, ಆಂಟೊನಿ ಲೋಬೊ, ಕ್ಲಿಫರ್ಡ್ ವೇಗಸ್, ರಾಮದಾಸ ಶೆಣೈ, ಇಬ್ರಾಹಿಂ, ದಿನೇಶ್ ಆಳ್ವ, ವಿ ಕೆ ಅಶ್ರಫ್, ರಾಮಣ್ಣ, ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು ಹೋರಾಟ ಸಮಿತಿ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ, ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಜಾನ್ ಕುಟಿನ್ಹಾ ಮತ್ತಿತರರು ಉಪಸ್ಥಿತರಿದ್ದರು.