ಪುತ್ತೂರು: ತಾಲೂಕು ಆರೋಗ್ಯಾಧಿಕಾರಿ ಮತ್ತು ನಗರಸಭೆಯ ಆರೋಗ್ಯ ವಿಭಾಗದ ಅಧಿಕಾರಿಗಳು ಆಹಾರ ಸುರಕ್ಷತಾ ಹಿನ್ನೆಲೆಯಲ್ಲಿ ಪುತ್ತೂರು ಪೇಟೆಯಲ್ಲಿ ವಿವಿಧ ಹೊಟೇಲ್‌ಗಳ ಮೇಲೆ ಅನಿರೀಕ್ಷಿತ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದ ವೇಳೆ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ ಬಳಿ ಆರೋಗ್ಯ ಇಲಾಖೆ ಮತ್ತು ನಗರಸಭೆಯಿಂದ ಅನುಮತಿ ಪಡೆಯದೇ ಅಕ್ರಮವಾಗಿ ಹೊಟೇಲ್ ನಡೆಸುತ್ತಿರುವ ಕುರಿತು ಬೆಳಕಿಗೆ ಬಂದಿದೆ.

ಕಳೆದ ಕೆಲ ದಿನಗಳಿಂದ ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ್ ರೈ, ಆರೋಗ್ಯ ನಿರೀಕ್ಷಣಾಧಿಕಾರಿ ರವಿಶಂಕರ್ ಎಂ ಮತ್ತು ನಗರಸಭೆ ಹಿರಿಯ ಆರೋಗ್ಯ ನಿರೀಕ್ಷರಾದ ಶ್ವೇತಾ ಕಿರಣ್, ವರಲಕ್ಷ್ಮೀ, ಮತ್ತು ಇತರ ಅಧಿಕಾರಿಗಳು ಜಂಟಿಯಾಗಿ ಹೊಟೇಲ್‌ಗಳಲ್ಲಿ ಯಾವ ರೀತಿ ಸ್ವಚ್ಛತೆ ಕಾಪಾಡಿಕೊಂಡು ಗ್ರಾಹಕರಿಗೆ ಸೇವೆ ನೀಡಲಾಗುತ್ತಿದೆ ಎನ್ನುವುದನ್ನು ತಿಳಿದುಕೊಳ್ಳಲು ಕಾರ್ಯಾಚರಣೆ ಕೈಗೊಂಡಿದ್ದರು.
ಸ್ವಚ್ಛತೆಯ ಬಗ್ಗೆ ಖುದ್ದಾಗಿ ತಿಳಿದುಕೊಂಡು ನಿರ್ಲಕ್ಷ್ಯ ವಹಿಸಿದ್ದ ಮಾಲೀಕರುಗಳಿಗೆ ಎಚ್ಚರಿಕೆ ನೀಡುತ್ತಿದ್ದರು.
ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿಯಲ್ಲಿ ಲೈಸನ್ಸ್ ಇಲ್ಲದೆ ಹೊಟೇಲ್ ನಡೆಸುತ್ತಿದ್ದಾರೆಂಬ ಲಿಖಿತ ದೂರಿಗೆ ಸಂಬಂಧಿಸಿದಂತೆ ಲಿಬರ್ಟಿ ಹೊಟೇಲ್‌ಗೆ ದಾಳಿ ನಡೆಸಿದಾಗ ನಗರಸಭೆಯಿಂದ ಮತ್ತು ಆರೋಗ್ಯ ಇಲಾಖೆಯಿಂದ ಲೈಸನ್ಸ್ ಪಡೆಯದೆ ಹೊಟೇಲ್ ನಡೆಸುತ್ತಿರುವ ಮಾಹಿತಿ ಬೆಳಕಿಗೆ ಬಂದಿದೆ. ಬಳಿಕ ಹೊಟೇಲ್ ಅನ್ನು ಬಂದ್ ಮಾಡಲು ಸೂಚಿಸಿದರು ಎಂದು ತಿಳಿದು ಬಂದಿದೆ.
ಮುರದಲ್ಲೂ ಕೂಡಾ ಹೊಟೇಲ್‌ವೊಂದರಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆಂದು ವರದಿಯಾಗಿದೆ..