ಪುತ್ತೂರು: ನಗರ ಸಭಾ ವ್ಯಾಪ್ತಿಯ ಸೂತ್ರಬೆಟ್ಟು ಪರಿಸರದಲ್ಲಿ 6 ಮನೆಗಳಿಗೆ ರಸ್ತೆಯ ವ್ಯವಸ್ಥೆ ಇಲ್ಲದೆ ಇದ್ದು, ನಗರ ಸಭಾ ವತಿಯಿಂದ ರಸ್ತೆ ನಿರ್ಮಾಣ ಕಾರ್ಯ ನಡೆಸಲಾಗುತ್ತಿದ್ದು, ಇಂದು ನಗರ ಸಭಾ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಗರ ಸಭಾ ಅಧ್ಯಕ್ಷ ಜೀವಂಧರ್ ಜೈನ್, ಸದಸ್ಯ ಪ್ರೇಮ್ ಕುಮಾರ್, ಪೌರಯುಕ್ತರಾದ ಮಧು ಎಸ್. ಮನೋಹರ್ ಹಾಗೂ ನಗರ ಸಭಾ ಸಹಾಯಕ ಕಾರ್ಯಪಾಲಕ ಅಭಿಯಂತರರು ಭೇಟಿ ನೀಡಿ ರಸ್ತೆ ನಿರ್ಮಾಣ ಕಾಮಗಾರಿಯನ್ನು ವೀಕ್ಷಣೆ ಮಾಡಿದರು.
ಈ ರಸ್ತೆ ನಿರ್ಮಾಣ ಸ್ಥಳೀಯರ ಹಾಗೂ ಸಾರ್ವಜನಿಕರ ಬಹು ವರುಷಗಳ ಬೇಡಿಕೆಯಾಗಿದ್ದು, ಬೇಡಿಕೆಯನ್ನು ಈಡೇರಿಸುತ್ತಿರುವ ಬಗ್ಗೆ ಅಧಿಕಾರಿಗಳಲ್ಲಿ ಸ್ಥಳೀಯರು ಮೆಚ್ಚುಗೆ ವ್ಯಕ್ತ ಪಡಿಸಿದರು..