ಬೆಂಗಳೂರು: ಆಮ್ ಆದ್ಮಿ ಪಕ್ಷದಲ್ಲಿದ್ದ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರು ಇಂದು ಭಾರತೀಯ ಜನತಾ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರಿದರು.

ಬಳಿಕ ಮಾತನಾಡಿದ ಅವರು, ನಾನು ಬಿಜೆಪಿಗೆ ಹೆಚ್ಚಿನ ಕೊಡುಗೆ ನೀಡಬಹುದು ಎಂದು ಭಾವಿಸುತ್ತೇನೆ. ಬಿಜೆಪಿಯು ದೇಶವ್ಯಾಪಿ ಸಂಘಟನೆ ಹೊಂದಿರುವ ಪಕ್ಷ. ಪ್ರಧಾನಿ ಮೋದಿಯವರ ದೂರದೃಷ್ಟಿ ನನ್ನನ್ನು ಪಕ್ಷಕ್ಕೆ ಸೇರಲು ಪ್ರೇರೇಪಿಸಿತು. ಆಪ್ ದೊಡ್ಡದಾಗಿ ಬೆಳೆಯಲ್ಲ. ಅವರು ಒಂದು ಕೂಟದ ಕೈಯಲ್ಲಿದ್ದಾರೆ, ಅವರ ಇಬ್ಬರು ಮಂತ್ರಿಗಳು ಜೈಲಿನಲ್ಲಿರುವುದು ನಾಚಿಕೆಗೇಡಿನ ಸಂಗತಿ. ಪಕ್ಷದಲ್ಲಿ ಸ್ಪಷ್ಟತೆ ಇಲ್ಲ ಎಂದರು.