ವೀರಕಂಭ: ಆಕಸ್ಮಿಕವಾಗಿ ಗುಡ್ಡಕ್ಕೆ ಬೆಂಕಿ ತಗುಲಿ ಅಪಾರ ನಷ್ಟ ಸಂಭವಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಕೆಲಿಂಜ ಬಳ್ಳಮಲೆ ರಕ್ಷಿತಾರಣ್ಯದಲ್ಲಿ ನಡೆದಿದೆ.
ಮೀಸಲು ಅರಣ್ಯ ಇಲಾಖೆಗೆ ಸೇರಿದ ಗುಡ್ಡ ಇದಾಗಿದ್ದು, ಆಕಸ್ಮಿಕವಾಗಿ ಅಗ್ನಿ ಅವಘಡ ಸಂಭವಿಸಿದೆ. ಈ ಕಾಡಿನಲ್ಲಿ ಕೋಟ್ಯಾಂತರ ಬೆಲೆಬಾಳುವ ವಿವಿಧ ಜಾತಿಯ ಮರಗಳಿದ್ದು, ಬಹುತೇಕ ಸಣ್ಣ ಮರಗಳು ಬೆಂಕಿಗಾಹುತಿಯಾಗಿವೆ ಎನ್ನಲಾಗಿದೆ.
ಅರಣ್ಯ ಇಲಾಖೆ ಸಿಬ್ಬಂದಿಗಳು ಹಾಗೂ ಮಂಗಳೂರು ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಕೂಡಲೇ ಘಟನಾ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಎಂದು ವರದಿಯಾಗಿದೆ.