ಮಂಗಳೂರಿನ ಮಿಲಾಗ್ರಿಸ್ ಬಳಿ ಇರುವ ಜ್ಯುವೆಲ್ಲರಿ ಶಾಪ್ ಗೆ ನುಗ್ಗಿ ಸಿಬ್ಬಂದಿಯನ್ನು ಹತ್ಯೆ ಮಾಡಿದ ಪ್ರಕರಣದ ಆರೋಪಿಯನ್ನು ಕೇರಳದ ಕಾಸರಗೋಡಿನಲ್ಲಿ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.
ಬಂಧಿತ ಆರೋಪಿಯನ್ನು ಕೇರಳದ ಕಲ್ಲಿಕೋಟೆಯ ಚಟ್ಟನಾಡುತ್ ಕೆಳಮನೆ ನಿವಾಸಿ ಶಿಫಾಸ್(33) ಎಂದು ಗುರುತಿಸಲಾಗಿದೆ.
ಕಾಸರಗೋಡು ಮಲ್ಲಿಕಾರ್ಜುನ ದೇವಸ್ಥಾನದ ಆವರಣದಲ್ಲಿ ಕೇರಳ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಕಾಸರಗೋಡು ಡಿವೈಎಸ್ಪಿ ಸುಧಾಕರನ್ ನೇತೃತ್ವದ ಪೊಲೀಸ್ ತಂಡದಿಂದ ಬಂಧನವಾಗಿದೆ. ಆರೋಪಿ ಶಿಫಾಸ್ ನನ್ನು ಮಂಗಳೂರು ಪೊಲೀಸರಿಗೆ ಒಪ್ಪಿಸುವ ಪ್ರಕ್ರಿಯೆ ನಡೆದಿದೆ ಎಂದು ವರದಿಯಾಗಿದೆ.
ಆರೋಪಿ ಶಿಫಾಸ್ ದರೋಡೆ ನಡೆಸುವ ಉದ್ದೇಶದಿಂದಲೇ ಕೊಲೆ ನಡೆಸಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ ಎಂದು ತಿಳಿದು ಬಂದಿದೆ..