ಪುತ್ತೂರು: ಬೆಳ್ಳಾರೆ ನಿವಾಸಿ, ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ರವರ ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ನಾಲ್ವರು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆಯ ಕಾರ್ಯಕರ್ತರಲ್ಲಿ ಓರ್ವನನ್ನು ಎನ್.ಐ.ಎ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ.
ಮಡಿಕೇರಿಯ ಎಂ.ಎಚ್. ತುಫೈಲ್ ನನ್ನು ಎನ್.ಐ.ಎ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದು, ಆತನನ್ನು ಬೆಂಗಳೂರಿನಲ್ಲಿ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.
ಬೆಂಗಳೂರಿನ ದಾಸರಹಳ್ಳಿಯಲ್ಲಿ ಆತನನ್ನು ಸೆರೆ ಹಿಡಿಯಲಾಗಿದೆ ಎಂದು ವರದಿ ತಿಳಿಸಿದೆ.
ತುಫೈಲ್ ಕುರಿತು ಮಾಹಿತಿ ನೀಡುವವರಿಗೆ ತಲಾ 5 ಲಕ್ಷ ರೂ. ಬಹುಮಾನ ನೀಡುವುದಾಗಿ ಎನ್.ಐ.ಎ ಘೋಷಣೆ ಮಾಡಿತ್ತು. ಅಷ್ಟೇ ಅಲ್ಲದೇ ಆರೋಪಿಗಳ ವಿರುದ್ಧ ಲುಕೌಟ್ ನೋಟೀಸ್ ಜಾರಿ ಮಾಡಲಾಗಿತ್ತು.
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಬಗ್ಗೆ ತನಿಖೆ ನಡೆಸಿದ್ದ ಎನ್ ಐಎ ಆರೋಪ ಪಟ್ಟಿ ಸಲ್ಲಿಸಿತ್ತು. 2047ರ ವೇಳೆಗೆ ಭಾರತದಲ್ಲಿ ಇಸ್ಲಾಮಿಕ್ ಆಡಳಿತ ಸ್ಥಾಪಿಸುವ ತನ್ನ ಅಜೆಂಡಾವನ್ನು ಬಲಪಡಿಸಲು ಸಮಾಜದಲ್ಲಿ ಅಶಾಂತಿ, ಭಯ ಹಾಗೂ ಕೋಮು ದ್ವೇಷವನ್ನು ಬಿತ್ತುವ ತನ್ನ ಉದ್ದೇಶದ ಭಾಗವಾಗಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ), ತನ್ನ ‘ಶತ್ರುಗಳೆಂದು ಗ್ರಹಿಸಿದವರು’ ಮತ್ತು ಗುರಿಗಳನ್ನು ಕೊಲ್ಲುವ ಕಾರ್ಯಗಳನ್ನು ನಡೆಸುವ ಸಲುವಾಗಿಯೇ ಸರ್ವೀಸ್ ಟೀಮ್ಸ್ ಅಥವಾ ಕಿಲ್ಲರ್ ಸ್ಕ್ವಾಡ್ ಗಳೆಂದು ಕರೆಯುವ ರಹಸ್ಯ ತಂಡಗಳನ್ನು ರಚಿಸಿದೆ ಎಂದು ತನಿಖೆಯಿಂದ ಬಯಲಾಗಿದೆ…