ಪುತ್ತೂರು: ಹಿಂದೂ ಜಾಗರಣ ವೇದಿಕೆ ಪ್ರಮುಖರೋರ್ವರಿಗೆ ವ್ಯಕ್ತಿಯೋರ್ವರು ಜೀವ ಬೆದರಿಕೆ ಹಾಕಿದ್ದಾರೆಂದು ಆರೋಪಿಸಿ ಠಾಣೆಗೆ ದೂರು ನೀಡಿದ ಘಟನೆ ನಡೆದಿದೆ.
ಹಿಂದೂ ಜಾಗರಣ ವೇದಿಕೆ ಉಪ್ಪಿನಂಗಡಿ ವಲಯದ ಸಂಪರ್ಕ ಪ್ರಮುಖ್, ಬೆಳ್ತಂಗಡಿ ನೇಜಿಕಾರು ನಿವಾಸಿ ವಿಜೇತ್ ಕುಮಾರ್ ಎಂಬವರು ಠಾಣೆಗೆ ದೂರು ನೀಡಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಹಿಂದೂ ಜಾಗರಣ ವೇದಿಕೆಯ ಪ್ರಮುಖರಾದ ವಿಜೇತ್ ಕುಮಾರ್ ನೇಜಿಕಾರ್ ಮತ್ತು ಇನ್ನೋರ್ವ ವ್ಯಕ್ತಿಯ ಫೋನ್ ಮಾತುಕತೆ ವೈರಲ್ ಆಗಿದ್ದು, ವಿಜೇತ್ ಅವರಿಗೆ ಅವಚ್ಯ ಶಬ್ದಗಳಿಂದ ನಿಂದಿಸಲಾಗಿತ್ತು. ಇದು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಪಕ್ಷದ ವಲಯದಲ್ಲಿ ಕಾರ್ಯಕರ್ತರಿಂದ ತೀವ್ರ ಆಕ್ರೋಶಕ್ಕೆ ಒಳಗಾಗಿತ್ತು.
ಬೆಳ್ತಂಗಡಿ ಹಾಗೂ ಪುತ್ತೂರು ಪರಿಸರದಲ್ಲಿ ಸಂಘ ಪರಿವಾರದ ಸಂಘಟನೆಗಳಲ್ಲಿ ಸಕ್ರಿಯರಾಗಿ ಕೆಲಸ ಮಾಡುತ್ತಿದ್ದ ಹಿಂದೂ ಜಾಗರಣ ವೇದಿಕೆ ಪ್ರಮುಖ ವಿಜೇತ್ ಕುಮಾರ್ ನೇಜಿಕಾರ್ ರವರಿಗೆ ರವಿ ಎಂಬವರು ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಹಿಂದೂ ಮುಖಂಡ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿರುವುದು ಹಿಂದೂ ಕಾರ್ಯಕರ್ತರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನಲೆಯಲ್ಲಿ ಬೆದರಿಕೆಗೊಳಗಾದ ವಿಜೇತ್ ಕುಮಾರ್ ನೇಜಿಕ್ಕಾರ್ ಅವರು ಉಪ್ಪಿನಂಗಡಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.