ಬೆಳ್ತಂಗಡಿ: ಕೊಕ್ಕಡ ಸೌತಡ್ಕ ದೇವಸ್ಥಾನಕ್ಕೆ ತೆರಳುವ ರಸ್ತೆಯಲ್ಲಿ ಹಿಂದೂಯೇತರರ ಆಟೋ, ಟ್ಯಾಕ್ಸಿ ಇನ್ನಿತರ ವಾಹನಗಳ ಪ್ರವೇಶಕ್ಕೆ ನಿಷೇಧ ಹೇರಿ ಬ್ಯಾನರ್ ಅಳವಡಿಸಲಾಗಿದೆ.
ಬ್ಯಾನರ್ ನಲ್ಲಿ ವಿಶ್ವ ಹಿಂದೂ ಪರಿಷದ್, ಬಜರಂಗದಳ, ಹಿಂದೂ ಜಾಗರಣ ವೇದಿಕೆ ಕೊಕ್ಕಡ ಪ್ರಕಟಣೆ ಎಂದು ಬರೆಯಲಾಗಿದ್ದು, ‘ಹಿಂದೂ ಶ್ರದ್ಧಾ ಕೇಂದ್ರವಾದ ನಮ್ಮ ಊರಿನ ಪುಣ್ಯ ಕ್ಷೇತ್ರ ಸೌತಡ್ಕದಲ್ಲಿ ಅನ್ಯಕೋಮಿನವರು ಪ್ರವೇಶ ಮಾಡಿ ಭಕ್ತಾದಿಗಳನ್ನು ಲವ್ ಜಿಹಾದ್ ಹಾಗೂ ದುಷ್ಕೃತ್ಯ ನಡೆಸಿರುವುದು ಕಂಡು ಬಂದಿರುವುದರಿಂದ ಹಿಂದೂಯೇತರರ, ಆಟೋ ಮತ್ತು ಟ್ಯಾಕ್ಸಿ ಇನ್ನಿತರ ಯಾವುದೇ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ’ ಎಂದು ಬರೆಯಲಾಗಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಬ್ಯಾನರ್ ನ ಫೋಟೋಗಳು ವೈರಲ್ ಆಗುತ್ತಿದ್ದು, ಪರ-ವಿರೋಧದ ಚರ್ಚೆಗಳು ನಡೆಯುತ್ತಿದೆ..