ಪುತ್ತೂರಿನ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದ ಕಾಸರಗೋಡಿನ ಕೂಡ್ಲು ಬಿ.ಚಂದ್ರಶೇಖರ ಮತ್ತು ಚಿತ್ರ ಬಿ.ಎನ್ ದಂಪತಿಗಳ ಪುತ್ರ ಗಗನ್ ದೀಪಕ್ ರವರು ಭಾರತೀಯ ಸೇನೆಯ ನರ್ಸಿಂಗ್ ಅಸಿಸ್ಟೆಂಟ್ ಹುದ್ದೆಯ ದೈಹಿಕ ಕ್ಷಮತೆಯ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಇದೀಗ ಲಿಖಿತ ಪರೀಕ್ಷೆಯಲ್ಲೂ ಉತ್ತೀರ್ಣರಾಗಿ ನೇಮಕಾತಿಯಲ್ಲಿ ಆಯ್ಕೆಯಾಗಿದ್ದಾರೆ.
ಪುತ್ತೂರು ತಾಲೂಕು ಪಡ್ನೂರು ಗ್ರಾಮದ ಪಡ್ಡಾಯೂರಿನ ರಾಧಾಕೃಷ್ಣ.ಬಿ ಮತ್ತು ಹರ್ಷಿತಾ ದಂಪತಿಗಳ ಪುತ್ರಿ ಸುದಾನ ಶಾಲೆಯ ವಿದ್ಯಾರ್ಥಿನಿ ಹೃತ್ವಿಕಾ.ಆರ್.ನಾೖಕ್ ಅಖಿಲ ಭಾರತ ಸೈನಿಕ ಶಾಲೆಯ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮದ ಉಜ್ಜಾಲ್ ಮನೆ ಸದಾನಂದ ಬಂಗೇರ ಮತ್ತು ಸುಮತಿ ದಂಪತಿಗಳ ಪುತ್ರಿ ರಕ್ಷಿತಾ .ಯು ರವರು ಕೇಂದ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆ ( CTET) ಯಲ್ಲಿ ಉತ್ತೀರ್ಣರಾಗಿದ್ದಾರೆ. ಈ ಮೂಲಕ ವಿದ್ಯಾಮಾತಾ ಅಕಾಡೆಮಿಯ ಮುಕುಟಕ್ಕೆ ಇನ್ನೊಂದು ಗರಿ ಸೇರ್ಪಡೆಯಾಗಿದೆ.
ವಿದ್ಯಾಭ್ಯಾಸದ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳನ್ನು ತಯಾರು ಮಾಡುವ ಬಗ್ಗೆ ಪೋಷಕರು ಯೋಚಿಸಿದರೆ ಅವರ ಮಕ್ಕಳು ಮುಂದಿನ ದಿನಗಳಲ್ಲಿ ಉನ್ನತ ಸರಕಾರಿ ಹುದ್ದೆಗೇರಲು ಸಾಧ್ಯವಿದೆ.ಈ ನಿಟ್ಟಿನಲ್ಲಿ ವಿದ್ಯಾಮಾತಾ ಅಕಾಡೆಮಿಯು ಮಾಡುತ್ತಿರುವ ಪ್ರಯತ್ನಕ್ಕೆ ಎಲ್ಲರೂ ಕೈ ಜೋಡಿಸಿ ನಮ್ಮ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸರಕಾರಿ ಅಧಿಕಾರಿಗಳನ್ನಾಗಿಸುವ ಬಗ್ಗೆ ನಾವೆಲ್ಲರೂ ಪ್ರಯತ್ನಿಸಬೇಕಾಗಿದೆ ಎಂದು ವಿದ್ಯಾಮಾತಾ ಅಕಾಡೆಮಿಯ ಆಡಳಿತ ನಿರ್ದೇಶಕರಾದ ಭಾಗ್ಯೇಶ್.ರೈ ಯವರು ತಮ್ಮ ಅನಿಸಿಕೆಯನ್ನು ಹಂಚಿಕೊಂಡಿದ್ದಾರೆ.
ಸೈನಿಕ ಶಾಲೆ, ನವೋದಯ ಶಾಲೆ ಸೇರಿದಂತೆ ವಿವಿಧ ಪ್ರವೇಶ ಪರೀಕ್ಷೆಗಳಿಂದ ಹಿಡಿದು ಭಾರತೀಯ ಸೇನೆ,ಪೊಲೀಸ್, ಅರಣ್ಯ,ಶಿಕ್ಷಕರ ನೇಮಕಾತಿಯಿಂದ ಹಿಡಿದು ಕೆ.ಎ.ಎಸ್, ಐ.ಎ.ಎಸ್ ವರೆಗಿನ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯನ್ನು ಪಡೆಯಲು ವಿದ್ಯಾಮಾತಾ ಅಕಾಡೆಮಿಯಲ್ಲಿ ಬಹಳಷ್ಟು ಅವಕಾಶಗಳಿವೆ. ಇದೇ ಬರುವ ಎಪ್ರಿಲ್ ತಿಂಗಳಿನಲ್ಲಿ “ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯ ಪೂರ್ವಭಾವಿ ತಯಾರಿಯ ಬೇಸಿಗೆ ಶಿಬಿರವನ್ನು ವಿದ್ಯಾಮಾತಾ ಅಕಾಡೆಮಿಯು ನಡೆಸಲಿದೆ.
ಆಸಕ್ತರು ವಿದ್ಯಾಮಾತಾ ಅಕಾಡೆಮಿಯನ್ನು ಸಂಪರ್ಕಿಸಿ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ.
ಸಂಪರ್ಕ ಸಂಖ್ಯೆ – 9620468869/9148935808