ಪುತ್ತೂರು: ಆಕಸ್ಮಿಕವಾಗಿ ಗುಡ್ಡದಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಮುಕ್ರಂಪಾಡಿಯಲ್ಲಿ ನಡೆದಿದೆ.

ಮುಕ್ರಂಪಾಡಿ ರಸ್ತೆ ಸಮೀಪದ ಗುಡ್ಡಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.

ಬೇಸಿಗೆಗಾಲ ಪ್ರಾರಂಭವಾಗುತ್ತಿದ್ದಂತೆ ಬಿಸಿಲ ಧಗೆಗೆ ಕಾಡು-ಗುಡ್ಡಗಳು ಬೆಂಕಿಗಾಹುತಿಯಾಗುತ್ತಿದ್ದು, ಅಪಾರ ಪ್ರಮಾಣದ ನಷ್ಟ ಸಂಭವಿಸುತ್ತಿದೆ..
