ಪುತ್ತೂರು: ಕೋಡಿಂಬಾಡಿಯ ಶಾಂತಿನಗರ ಸರಕಾರಿ
ಪ್ರೌಢಶಾಲೆಯ ಕಂಪ್ಯೂಟರ್ ಕೊಠಡಿಯ ಯುಪಿಯಸ್‌ನ
ಹಳೆಯ ಬ್ಯಾಟರಿಗಳನ್ನು ಕಳವುಗೈದ ಘಟನೆ ನಡೆದಿದೆ.
ಶಾಂತಿನಗರ ಸರಕಾರಿ ಪ್ರೌಢಶಾಲೆಯ ಒಂದನೇ ಅಂತಸ್ತಿನಲ್ಲಿರುವ ಕಂಪ್ಯೂಟರ್ ಕೊಠಡಿಯಲ್ಲಿ ಇರಿಸಲಾಗಿದ್ದ ಕಂಪ್ಯೂಟರಿನ ಹಳೆಯ 16 ಬ್ಯಾಟರಿಗಳನ್ನು ಕಳವು ಮಾಡಲಾಗಿದೆ ಎಂದು ಮುಖ್ಯೋಪಾಧ್ಯಾಯ ವಿಷ್ಣುಪ್ರಸಾದ್ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಮಾ.9 ರಂದು ಶಾಲಾ ಅವಧಿಯ ನಂತರ ಕೊಠಡಿಯ ಬೀಗ
ಮುರಿದು ಬ್ಯಾಟರಿಗಳನ್ನು ಕಳವು ಮಾಡಲಾಗಿದ್ದು, ತನಿಖೆ
ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಅವರು ದೂರಿನಲ್ಲಿ
ಒತ್ತಾಯಿಸಿದ್ದಾರೆ. ಪೊಲೀಸರು ಪ್ರೌಢಶಾಲೆಗೆ ತೆರಳಿ ಸ್ಥಳ ಪರಿಶೀಲನೆ ನಡೆಸಿದ್ದಾರೆ..