ವಿಟ್ಲ: ಚಾಲಕ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದು ಪಲ್ಟಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆ ಮಸೀದಿ ಬಳಿ ನಡೆದಿದೆ.
ಮೈಸೂರು ಮೂಲದ ಐವರು ಕಾರಿನಲ್ಲಿ ಮಂಗಳೂರು ಕಡೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ.
ಐದು ಮಂದಿಯ ಪೈಕಿ ಇಬ್ಬರು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.