ಬಂಟ್ವಾಳ: ತಾಲೂಕು ಗೋಳ್ತಮಜಲು ಗ್ರಾಮದ ಶಿವಶಕ್ತಿ ಬ್ರದರ್ಸ್ ನಿಟಿಲಾಪುರ (ರಿ) ಟ್ರಸ್ಟ್ ಹಾಗೂ ಊರ ಪರವೂರ ದಾನಿಗಳ ಸಹಕಾರದಿಂದ ನೂತನವಾಗಿ ಸುಮಾರು 20 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಮಹಾದ್ವಾರ ಹಾಗೂ ಕಾಣಿಕೆ ಹುಂಡಿಯ ಲೋಕಾರ್ಪಣೆ ಕಾರ್ಯಕ್ರಮ ಮಾ.14 ರಂದು ಸಂಜೆ 4 ಗಂಟೆಗೆ ನಡೆಯಲಿದೆ.
ಬ್ರಹ್ಮಶ್ರೀ ನೀಲೇಶ್ವರ ವೇದಮೂರ್ತಿ ಪದ್ಮನಾಭ ತಂತ್ರಿಗಳ ಉಪಸ್ಥಿತಿಯಲ್ಲಿ, ಪುತ್ತೂರು ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ರವರು ಲೋಕಾರ್ಪಣೆ ಮಾಡಲಿದ್ದಾರೆ ಎಂದು ಶಿವಶಕ್ತಿ ಬ್ರದರ್ಸ್ ನಿಟಿಲಾಪುರ (ರಿ) ಟ್ರಸ್ಟ್ ಇದರ ಅಧ್ಯಕ್ಷರಾದ ಮನೋಜ್ ಗಟ್ಟಿ ನೆಟ್ಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.