ಪುಂಜಾಲಕಟ್ಟೆ: ಕಾರೊಂದು ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮವಾಗಿ ದ್ವಿಚಕ್ರ ವಾಹನ ಸವಾರ ಮೃತಪಟ್ಟು, ಇನ್ನೋರ್ವ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬಂಟ್ವಾಳ ಸಮೀಪದ ರಾಯಿ ಎಂಬಲ್ಲಿ ನಡೆದಿದೆ.
ಬಂಟ್ವಾಳ ಬೈಪಾಸ್ ನಿವಾಸಿ, ವಿದ್ಯುತ್ ಗುತ್ತಿಗೆದಾರ ಚಂದ್ರಶೇಖರ (50) ಮೃತ ವ್ಯಕ್ತಿ. ಬಂಟ್ವಾಳ ನಿವಾಸಿ ಇಡ್ಲಿ ಯೋಗೀಶ್ ಗಂಭೀರವಾಗಿ ಗಾಯಗೊಂಡ ವ್ಯಕ್ತಿ ಎಂದು ತಿಳಿದು ಬಂದಿದೆ.
ಸಿದ್ದಕಟ್ಟೆಯಿಂದ ಬಂಟ್ವಾಳ ಕಡೆ ಬರುತ್ತಿದ್ದ ವೇಳೆ ರಾಯಿ ಎಂಬಲ್ಲಿ ಹಿಂಬದಿಯಿಂದ ಬರುತ್ತಿದ್ದ ಕಾರು ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ದ್ವಿಚಕ್ರ ವಾಹನದಲ್ಲಿ ಹಿಂಬದಿಯ ಸವಾರನಾಗಿದ್ದ ಚಂದ್ರಶೇಖರ ರಸ್ತೆಗೆ ಎಸೆಯಲ್ಪಟ್ಟು ಸಾವನ್ನಪ್ಪಿದ್ದಾರೆ.
ಚಾಲಕ ಯೋಗೀಶ್ ಅವರ ತಲೆಗೆ ಗಂಭೀರವಾಗಿ ಗಾಯವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.