ವಿಟ್ಲ: ವಿವಾಹಿತ ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದ ಮೈರ ಕರವೀರ ಎಂಬಲ್ಲಿ ನಡೆದಿದೆ.
ಮೃತರನ್ನು ಪದ್ಮಿನಿ (35) ಎಂದು ಗುರುತಿಸಲಾಗಿದೆ.

ಪದ್ಮಿನಿ ರವರು ವಿವಾಹಿತೆಯಾಗಿದ್ದು, ಪತಿಯನ್ನು ತೊರೆದು ಪೋಷಕರ ಮನೆಯಲ್ಲಿ ವಾಸವಿದ್ದರು.
ಪದ್ಮಿನಿ ರವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದು, ಈ ಮೊದಲು ಎರಡು, ಮೂರು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದರೆನ್ನಲಾಗಿದೆ. ಇಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಮೃತರು ತಂದೆ, ಓರ್ವ ಪುತ್ರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.