ಶಿರ್ವ: ಕಾರು ಮತ್ತು ಕಂಟೈನರ್ ನಡುವೆ ಹೊನ್ನಾವರದಲ್ಲಿ ನಡೆದ ಭೀಕರ ಅಪಘಾತದಲ್ಲಿ ಬಂಟಕಲ್ಲು ಶ್ರೀ ಮಧ್ವ ವಾದಿರಾಜ ತಾಂತ್ರಿಕ ಕಾಲೇಜಿನ ಮೆಕ್ಯಾನಿಕಲ್ ವಿಭಾಗದ ಹಿರಿಯ ಸಹಾಯಕ ಪ್ರಾಧ್ಯಾಪಕ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ.
ಹಿರಿಯ ಸಹಾಯಕ ಪ್ರಾಧ್ಯಾಪಕ ಅನಂತೇಶ ರಾವ್ (40) ಮೃತ ವ್ಯಕ್ತಿ.
ಅನಂತೇಶ ರಾವ್ ಉಡುಪಿಯಿಂದ ಸೋದೆ ಮೂಲ ಮಠಕ್ಕೆ ತೆರಳುತ್ತಿದ್ದ ವೇಳೆ ಅವರ ಕಾರು ಹೊನ್ನಾವರದ ಬಳಿ ಕಂಟೈನರ್ಗೆ ಡಿಕ್ಕಿ ಹೊಡೆದಿದ್ದು, ಈ ಪರಿಣಾಮ ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮಂಗಳೂರು ನಿವಾಸಿಯಾದ ಅವರು ಪತ್ನಿ ಮಂಗಳೂರು ಎಂ.ವಿ.ಶೆಟ್ಟಿ ಎಲೈಡ್ ಹೆಲ್ತ್ ಸೈನ್ಸಸ್ ಕಾಲೇಜಿನ ಪ್ರಾಂಶುಪಾಲೆ ಪ್ರಿಯಾ ಅನಂತೇಶ್ ಮತ್ತು ಓರ್ವ ಪುತ್ರನನ್ನು ಅಗಲಿದ್ದಾರೆ.