ಮಂಗಳೂರು : ಟಿಪ್ಪರ್ ಲಾರಿಯೊಂದು ಸ್ಕೂಟರ್ ಮೇಲೆ ಹರಿದ ಪರಿಣಾಮ ಇಬ್ಬರು ಸಾವನಪ್ಪಿದ ಘಟನೆ ನಂತೂರು ಸರ್ಕಲ್ ನಲ್ಲಿ ನಡೆದಿದೆ.

ದ್ವಿಚಕ್ರ ವಾಹನದಲ್ಲಿ ಇಬ್ಬರು ಸಿಗ್ನಲ್ ಕಾಯುತ್ತಿದ್ದ ವೇಳೆ ಏಕಾಏಕಿ ಬಂದ ಟಿಪ್ಪರ್ ಲಾರಿ ದ್ವಿಚಕ್ರ ವಾಹನದ ಮೇಲೆ ಹರಿದಿದ್ದು, ದ್ವಿಚಕ್ರ ವಾಹನದಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರು ತಂದೆ – ಮಗಳು ಎನ್ನಲಾಗಿದೆ.

ಟಿಪ್ಪರ್ ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ್ದು, ಸ್ಥಳದಲ್ಲಿ ಉದ್ರಿಕ್ತ ವಾತಾವರಣ ನಿರ್ಮಾಣವಾಗಿದೆ. ನಂತೂರಿನಲ್ಲಿ ಕರ್ತವ್ಯದಲ್ಲಿದ್ದ ಸಂಚಾರಿ ಪೊಲೀಸರು ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.