ವಿಟ್ಲ: ವಿಟ್ಲ ಹೋಬಳಿ ನಾಡಕಛೇರಿ ನೂತನ ಕಟ್ಟಡ ಉದ್ಘಾಟನೆ ಹಾಗೂ ವಿಟ್ಲ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 94ಸಿ. ಸಿ. ಹಕ್ಕು ಪತ್ರ ವಿತರಣಾ ಸಮಾರಂಭ ವಿಟ್ಲ ಚಂದಳಿಕೆ ಭಾರತ್ ಅಡಿಟೋರಿಯಂನಲ್ಲಿ ಮಾ.19 ರಂದು ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಇಂಧನ ಸಚಿವ ಸುನಿಲ್ ಕುಮಾರ್ ನಡೆಸಲಿದ್ದು, ಅಧ್ಯಕ್ಷತೆಯನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ವಹಿಸಲಿದ್ದಾರೆ.
ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಸಭಾ ಸಂಸದ ಡಾ. ಡಿ.ವಿರೇಂದ್ರ ಹೆಗ್ಗಡೆ, ಬಂಟ್ವಾಳ ಶಾಸಕ ರಾಜೇಶ್ ನಾಕ್ ಯು., ವಿಧಾನ ಪರಿಷತ್ ಶಾಸಕರಾದ ಎಸ್. ಎಲ್. ಭೋಜೇಶ್ ಗೌಡ, ಮಂಜುನಾಥ ಭಂಡಾರಿ, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಜಿಲ್ಲಾ ರವಿಕುಮಾರ್ ಎಂ. ಆರ್. ಭಾಗವಹಿಸಲಿದ್ದಾರೆ.
