ಸುಳ್ಯ: ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸುಳ್ಯ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಸುಳ್ಯ ತಾಲೂಕು ಬೆಟ್ಟಂಪಾಡಿ ನಿವಾಸಿ ಕಬೀರ್ ಎಸ್.ಎ (36) ಬಂಧಿತ ಆರೋಪಿ.

ಬಂಧಿತನಿಂದ 1,32000 ಮೌಲ್ಯದ 44. ಗ್ರಾಂ. ಎಂಡಿಎಂಎ ಹಾಗೂ ಎರಡು ಮೊಬೈಲ್ ಫೋನ್ ಗಳು, ಒಂದು ಕಾರು, ಒಂದು ತೂಕ ಮಾಪಕವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.
ಈ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.