ಪುತ್ತೂರು: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಸಂಬಂಧಪಟ್ಟ ಸ್ಥಳವಾದ ಬೊಳುವಾರಿನಲ್ಲಿ ಹಿಂದೂ ಜಾಗರಣ ವೇದಿಕೆ ಪುತ್ತೂರು ವತಿಯಿಂದ ಮಾ.24 ರಂದು ಆಶ್ಲೇಷ ಬಲಿ, ಧಾರ್ಮಿಕ ಸಭೆ ಮತ್ತು ಅರ್ಧಏಕಾಹ ಭಜನೆ ಹಾಗೂ ಸಂಜೆ ಜನಜಾಗೃತಿ ಸಭೆ ನಡೆಯಲಿದೆ.
ಕಾರ್ಯಕ್ರಮದಲ್ಲಿ ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ರವರು ಆಶೀರ್ವಚನ ನೀಡಲಿದ್ದಾರೆ.

ಖ್ಯಾತ ವೈದ್ಯರಾದ ಡಾ. ಎಂ.ಕೆ.ಪ್ರಸಾದ್ ರವರು ಸಭಾಧ್ಯಕ್ಷತೆಯನ್ನು ವಹಿಸಲಿದ್ದಾರೆ. ಧಾರ್ಮಿಕ ಮುಖಂಡರಾದ ವೇದಮೂರ್ತಿ ಕುಂಟಾರು ರವೀಶ ತಂತ್ರಿಗಳು ದಿಕ್ಸೂಚಿ ಭಾಷಣ ಮಾಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಹಿಂದೂ ಜಾಗರಣ ವೇದಿಕೆ ಪ್ರಾಂತ ಸಂಪರ್ಕ ಪ್ರಮುಖ್ ರವಿರಾಜ ಕಡಬ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಮೋಹನ್ ರಾಮ್ ಸುಳ್ಳಿ ರವರು ಆಗಮಿಸಲಿದ್ದಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.



























