ಆಕ್ಷೇಪಾರ್ಹ ಟ್ವೀಟ್ ಮಾಡಿದ್ದಾರೆ ಎನ್ನುವ ಕಾರಣಕ್ಕಾಗಿ ಇಂದು ಬೆಳಗ್ಗೆ ನಟ ಚೇತನ್ ರನ್ನು ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸರು ಬಂಧಿಸಿದ್ದರು. ಅವರನ್ನು ಕೋರ್ಟಿಗೂ ಹಾಜರುಪಡಿಸಿದ್ದರು. ಪೊಲೀಸರು ಹಾಕಿರುವ ಎಫ್ ಐಆರ್ ಆಧರಿಸಿ ನ್ಯಾಯಾಲಯವು ಚೇತನ್ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.
ಈ ಸಂದರ್ಭದಲ್ಲಿ ಚೇತನ್ ಪರ ವಕೀಲರು ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯವು ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ.
ಚೇತನ್ ಅವರು ಉರಿಗೌಡ, ನಂಜೇಗೌಡ ವಿಚಾರವಾಗಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದರು. ಈ ಕುರಿತು ಶಿವಕುಮಾರ್ ಎನ್ನುವವರು ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರನ್ನು ಆಧರಿಸಿ ಶೇಷಾದ್ರಿಪುರಂ ಪೊಲೀಸರು ವಶಕ್ಕೆ ಪಡೆದು, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು.
ದೂರಿನಲ್ಲಿ ಚೇತನ್ ಅವರು ಹಿಂದೂ ಭಾವನೆಗಳಿಗೆ ಧಕ್ಕೆ ತರುವ ರೀತಿಯಲ್ಲಿ ಟ್ವೀಟ್ ಮಾಡಿದ್ದಾರೆ ಎಂದು ಉಲ್ಲೇಖಿಸಿದ್ದಾರೆ ಶಿವಕುಮಾರ್. ಈ ದೂರನ್ನು ಆಧರಿಸಿ ಎಫ್ ಐ ಆರ್ ದಾಖಲಿಸಿದ್ದ ಶೇಷಾದ್ರಿಪುರಂ ಪೊಲೀಸರು ನಟ ಚೇತನ್ ರನ್ನು ಕೋರ್ಟಿಗೆ ಹಾಜರುಪಡಿಸಿದ್ದರು.


























