ಪುತ್ತೂರಿನ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ‘ವಿದ್ಯಾಮಾತಾ ಅಕಾಡೆಮಿ’ಯಲ್ಲಿ ತರಬೇತಿ ಪಡೆದು ಭಾರತೀಯ ಭೂಸೇನೆಯ ನರ್ಸಿಂಗ್ ಅಸಿಸ್ಟೆಂಟ್ ಹುದ್ದೆಗೆ ಆಯ್ಕೆಯಾಗಿರುವ ಕಾಸರಗೋಡು ಜಿಲ್ಲೆಯ ಕೂಡ್ಲುವಿನ ಗಗನ್ ದೀಪಕ್.ಜಿ ರವರನ್ನು ಪೊಲೀಸ್ ಉಪ ಅಧೀಕ್ಷಕರಾದ ಡಾ.ವೀರಯ್ಯ ಹಿರೇಮಠ ರವರು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ವಿವಿಧ ನೇಮಕಾತಿಗಳಿಗೆ ಸಂಬಂಧಿಸಿದಂತೆ ತರಬೇತಿಯಲ್ಲಿರುವ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ತಯಾರಿ ಬಗ್ಗೆ ಉಪಯುಕ್ತ ಸಲಹೆಗಳನ್ನು ನೀಡಿದರು.
ವಿದ್ಯಾಮಾತಾ ಅಕಾಡೆಮಿಯ ಮೂಲಕ ವಿವಿಧ ನೇಮಕಾತಿಗಳಲ್ಲಿ ಆಯ್ಕೆಯಾಗಿರುವ ಬಗ್ಗೆ ಸಂಸ್ಥೆಯಿಂದ ಮಾಹಿತಿ ತಿಳಿದುಕೊಂಡು ಎಲ್ಲಾ ಪ್ರಯತ್ನಗಳಲ್ಲಿ ಯಶಸ್ಸುಗೊಳಿಸುವಂತೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಡಾ.ವೀರಯ್ಯ ಹಿರೇಮಠ ರವರನ್ನು ವಿದ್ಯಾಮಾತಾ ಅಕಾಡೆಮಿಯ ನಿರ್ದೇಶಕಿ, ತರಬೇತುದಾರೆ ರಮ್ಯಾ ಭಾಗ್ಯೇಶ್ ರೈ ರವರು ಸ್ವಾಗತಿಸಿದರು. ಆಡಳಿತ ನಿರ್ದೇಶಕರಾದ ಭಾಗ್ಯೇಶ್ ರೈ ರವರು ಮತ್ತು ತರಬೇತುದಾರರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.


























