ಸುಳ್ಯ: ಗುರುಂಪು ಬಳಿ ಬರೆ ಜರಿದು ಬಿದ್ದು ಮೂವರು ಕಾರ್ಮಿಕರು ಮಣ್ಣಿನಡಿ ಸಿಲುಕಿರುವ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ.
ಮೂವರ ಪೈಕಿ ಇಬ್ಬರು ಕಾರ್ಮಿಕರ ಮೃತದೇಹ ಪತ್ತೆಯಾಗಿದೆ.

ಗಾಂಧಿನಗರ-ಆಲೆಟ್ಟಿ ರಸ್ತೆಯಲ್ಲಿ ಕಾರ್ಮಿಕರು ಸೆಂಟರಿಂಗ್ ಕೆಲಸ ಮಾಡುತ್ತಿದ್ದ ವೇಳೆ ಗುರುಂಪು ಬಳಿ ಬರೆ ಜರಿದು ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಬಿದ್ದಿದೆ, ಇದರಿಂದ ಮೂವರು ಕಾರ್ಮಿಕರು ಮಣ್ಣಿನಡಿ ಸಿಲುಕಿದ್ದರು. ಈ ಪೈಕಿ ಇಬ್ಬರ ಮೃತದೇಹ ಪತ್ತೆಯಾಗಿದ್ದು, ಮತ್ತೋರ್ವ ಮಹಿಳೆಗಾಗಿ ಹುಡುಕಾಟ ನಡೆಯುತ್ತಿದೆ ಎಂದು ತಿಳಿದು ಬಂದಿದೆ.
ಸದ್ಯ ರಕ್ಷಣಾ ತಂಡದಿಂದ ಕಾರ್ಯಾಚರಣೆ ನಡೆಯುತ್ತಿದೆ. ಜೆಸಿಬಿ ಮುಖಾಂತರ ಮಣ್ಣು ತೆಗೆಯುವ ಕೆಲಸ ನಡೆಯುತ್ತಿದೆ. ಸ್ಥಳಕ್ಕೆ ಶಾಸಕ ಅಂಗಾರ ಅವರು ಭೇಟಿ ನೀಡಿದ್ದಾರೆ.