ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ನಿಯಂತ್ರಿಸಲು ನಾಳೆ ರಾತ್ರಿಯಿಂದ ಮುಂದಿನ 14 ದಿನಗಳ ಕಾಲ ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ,.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ. ಈ ಬಗ್ಗೆ ಇಂದು ನಡೆದ ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗಿದೆ.
ಈ ನಡುವೆ ಲಾಕ್‌ಡೌನ್‌ಗೆ ಸಂಬಂಧಪಟ್ಟಂತೆ ಎರಡು ವಾರಗಳ ಕಾಲ ಪರಿಸ್ಥಿತಿಯನ್ನು ನೋಡಿಕೊಂಡು ಈ ಸಮಯದಲ್ಲಿ ಪರಿಸ್ಥಿತಿ ಸುಧಾರಿಸದೇ ಹೋದ್ರೆ ಮತ್ತೆ ಒಂದು ವಾರ ಲಾಕ್‌ಡೌನ್ ಮಾಡಬಹುದು ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ರಾಜ್ಯದಲ್ಲಿ 18 ವರ್ಷಕ್ಕಿಂರ್ತ ಮೇಲ್ಪಟ್ಟ ಎಲ್ಲಾರಿಗೂ ಉಚಿತ ಕೊರೊನಾ ಲಸಿಕೆ ನೀಡುವಂತೆ ತೀರ್ಮಾನ ಕೈಗೊಳ್ಳಲಾಗಿದೆ. ಲಾಕ್ ಡೌನ್ ಅವಧಿ ಸಂದರ್ಭ ಬೆಳಗ್ಗೆ 6ರಿಂದ 10 ಗಂಟೆ ವರೆಗೆ ಅಗತ್ಯ ಸೇವೆಗಳಿಗೆ ವಿನಾಯಿತಿ ನಿಡಲಾಗಿದೆ. ಗಾರ್ಮೆಂಟ್ ಸೆಕ್ಟರ್, ಕೃಷಿ, ಮೆಡಿಕಲ್ ಸೇರಿ ಅಗತ್ಯ ಸೇವೆಗಳು ಎಂದಿನಂತೆ ಇರುತ್ತದೆ.14 ದಿನಗಳ ಕಾಲ ಸಾರಿಗೆ ಸಂಚಾರ ಬಂದ್ ಆಗಿರುತ್ತದೆ.
ಯಾವುದಕ್ಕೆ ಎಲ್ಲಾ ವಿನಾಯಿತಿ ? : ಹಾಲು ಹಣ್ಣು ತರಕಾರಿ ದಿನಸಿ ಮುಂತಾದ ಮೆಡಿಕಲ್, ಆಸ್ಪತ್ರೆಗಳು, ತುರ್ತು ಸಾರಿಗೆ ವ್ಯವಸ್ಥೆ, ಅಗ್ನಿಶಾಮಕ, ಪೊಲೀಸ್, ವಾಟರ್ ಸಪ್ಲೈ, ಕೈಗಾರಿಕಾ ಚಟುವಟಿಕೆಗಳಿಗೆ, ರೆಸ್ಟೋರೆಂಟ್ ಬೆಳಿಗ್ಗೆ ಮಾತ್ರ, ಕಟ್ಟಡ ನಿರ್ಮಾಣಕ್ಕೆ ಅನುಮತಿ. ಮದ್ಯ ಪ್ರಿಯರಿಗೆ ರಿಲೀಫ್ ನೀಡಿ ಬೆಳಗ್ಗೆ 6ರಿಂದ 10 ಗಂಟೆವರೆಗೂ ಮದ್ಯ ಮಾರಾಟಕ್ಕೆ ಅನುಮತಿ ನೀಡಲಾಗಿದೆ. ಆದರೆ ಪಾರ್ಸೆಲ್ಗೆ ಮಾತ್ರ ಅನುಮತಿ ನೀಡಲಾಗಿದೆ.