ಬಂಟ್ವಾಳ: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಓರ್ವ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಉಳಿ ಗ್ರಾಮದ ಅಂಕರೋಡಿ ಬಳಿ ನಡೆದಿದೆ.
ಮೃತ ಯುವಕ ಬಂಗೇರಕಟ್ಟೆ ನಿವಾಸಿ ಫಯಾಜ್ ಎಂದು ತಿಳಿದು ಬಂದಿದೆ.
ನಿನ್ನೆ ಸಂಜೆ ಕಕ್ಯಪದವು ಎಲ್ ಸಿಆರ್ ಸ್ಕೂಲ್ ಬಳಿ ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಬಂಗೇರಕಟ್ಟೆ ನಿವಾಸಿ ಫಯಾಜ್ ನನ್ನು ಆಸ್ಪತ್ರೆಗೆ ದಾಖಲಿಸಿದರೂ ಆತ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.